Breaking News

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ

ಹುಬ್ಬಳ್ಳಿಯ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಭರತ್ ಹೆಗಡೆ ಲೋಕಾಯುಕ್ತ ಬಲೆಗೆ ಬಿದ್ದ ಕಮರ್ಷಿಯಲ್ ಟ್ಯಾಕ್ಸ್ ಡಿಸಿ. ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭರತ್ ಹೆಗಡೆಯನ್ನು ಬಂಧಿಸಿದ್ದಾರೆ. 6 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಹಣದ ಸಮೇತ ಭರತ್ ಹೆಗಡೆ ಸಿಕ್ಕಿ ಬಿದ್ದಿದ್ದಾರೆ. ಲಾರಿ ಹಗೂ ಪೆಟ್ರೋಲ್ ಬಂಕ್ ಮಾಲೀಕನಿಗೆ 10 ಲಕ್ಷ ರೂ ನೀಡುವಂತೆ ಭರತ್ ಹೆಗಡೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 6 ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *