Breaking News

ಶಿವಮೊಗ್ಗ : ಬ್ರಿಡ್ಜ್​​ನಿಂದ ಉರುಳಿ ಬಿದ್ದ ಬಸ್, ಹಲವರ ಸ್ಥಿತಿ ಗಂಭೀರ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಗೆಹಳ್ಳ ಗ್ರಾಮದಲ್ಲಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಖಾಸಗಿ ಬಸ್​ವೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಬರುತ್ತಿದ್ದ ‘ಶ್ರೀ ರೇಣುಕಾಂಬ’ ಹೆಸರಿನ ಖಾಸಗಿ ಬಸ್ ಕಾಗೆಹಳ್ಳ ಗ್ರಾಮದ ಸಮೀಪವಿರುವ ಹಳ್ಳಕ್ಕೆ ಬಿದ್ದಿದೆ. ಬಸ್ ಚಲಿಸುತ್ತಿದ್ದ ವೇಳೆಯೇ ಈ ಅವಘಡ ಸಂಭವಿಸಿದ್ದು, ಹಳ್ಳಕ್ಕೆ ಬಿದ್ದ ರಭಸಕ್ಕೆ ಬಸ್ ಜಖಂಗೊಂಡಿದೆ. ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಈ ಪೈಕಿ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರ ನೆರವಿನೊಂದಿಗೆ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಅಪಘಾತಕ್ಕೆ ನೇರ ಕಾರಣ ಎಂದು ಸ್ಥಳೀಯರು ಹಾಗೂ ಪ್ರಯಾಣಿಕರು ದೂರಿದ್ದಾರೆ. ಕಿರಿದಾದ ರಸ್ತೆಯಲ್ಲಿ ವೇಗವಾಗಿ ಬಂದ ಚಾಲಕ, ನಿಯಂತ್ರಣ ಕಳೆದುಕೊಂಡು ಬಸ್ ಅನ್ನು ಹಳ್ಳಕ್ಕೆ ಇಳಿಸಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *