Breaking News

ವಿಷ ಸೇವಿಸಿದ್ದ ನವ ವಿವಾಹಿತ ಸಾವು

ಕಾರ್ಕಳ: ದಕ್ಷಿಣ ಕನ್ನಡ ಜಿಲ್ಲೆ ಕಡಬದ ನೆಲ್ಯಾಡಿ ಗ್ರಾಮದ ಸುದೀಪ್ ರೈ (31) ಎಂಬುವವರು ಕಾರ್ಕಳದ ತನ್ನ ಪತ್ನಿಯ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನೆಲ್ಯಾಡಿಯ ಸುದೀಪ್ ಕಾರ್ಕಳದ ಸೌಮ್ಯ ಶೆಟ್ಟಿಯನ್ನು ಪ್ರೀತಿಸಿ ಇತ್ತೀಚೆಗಷ್ಟೇ ಮದುವೆಯಾಗಿದ್ದು, ಕಾರ್ಕಳ ಬಂಗ್ಲೆಗುಡ್ಡೆ ಕಜೆ ಎಂಬಲ್ಲಿರುವ ಪತ್ನಿ ಮನೆಯಲ್ಲಿ ವಾಸವಿದ್ದರು. ಮೂರು ದಿನಗಳ ಹಿಂದೆ ಸುದೀಪ್ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದು, ಪತ್ನಿ, ಅವರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಉಡುಪಿ, ಮಂಗಳೂರಿನ ಆಸ್ಪತ್ರೆಯಲ್ಲೂ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಮಗ ಸುದೀಪ್ ಸಾವಿನ ಕುರಿತು ತಂದೆ ದಾಮೋದರ ಶೆಟ್ಟಿ, ಸೌಮ್ಯಾ ಶೆಟ್ಟಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *