Breaking News

ಸರ್ಜಾಪುರ: ಹೊತ್ತಿ ಉರಿದ ಬಿಗ್‌ ಬಾಸ್ಕೆಟ್‌ ದಾಸ್ತಾನು ಘಟಕ

ಸರ್ಜಾಪುರ (ಆನೇಕಲ್): ತಾಲೂಕಿನ ಸರ್ಜಾಪುರ ಸಮೀಪದ ಸೋಂಪುರ ಗೇಟ್‌ನಲ್ಲಿ ಸೋಮವಾರ ಬೆಳಗ್ಗೆ ಬಿಗ್ ಬಾಸ್ಕೆಟ್ ಇ-ಕಾಮರ್ಸ್‌ ಸಂಸ್ಥೆಯ ದಾಸ್ತಾನು ಘಟಕ ತಾಸುಗಟ್ಟಲೇ ಬೆಂಕಿ ಹೊತ್ತಿ ಉರಿದಿದೆ. ದಾಸ್ತಾನು ಕೇಂದ್ರದಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆ ನೋಡ ನೋಡುತ್ತಿದ್ದಂತೆಯೇ ಇಡೀ ಘಟಕಕ್ಕೆ ವ್ಯಾಪಿಸಿತು. ಕಟ್ಟಡದ ಸುತ್ತಮುತ್ತ ದಟ್ಟವಾದ ಹೊಗೆ ಆವರಿಸಿತ್ತು. ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿ ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡರು. ಕಟ್ಟಡದಲ್ಲಿ ನಿಲ್ಲಿಸಿದ್ದ ಕಾರು, ಬೈಕು ಹಾಗೂ ಇತರ ವಾಹನಗಳು ಭಾಗಶಃ ಸುಟ್ಟು ಹೋಗಿವೆ. ₹6 ಲಕ್ಷಕ್ಕೂ ಹೆಚ್ಚು ಮೌಲ್ಯದ ವಿವಿಧ ವಸ್ತುಗಳು ಭಸ್ಮವಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಮೂರು ತಾಸಿಗೂ ಹೆಚ್ಚು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *