Breaking News

4.22 ಲಕ್ಷ ರೂ ಮೌಲ್ಯದ 8 ಕೆಜಿ ಗಾಂಜಾ ಜಪ್ತಿ

ಹುಬ್ಬಳ್ಳಿ: ನರಸಾಪೂರ- ಹುಬ್ಬಳ್ಳಿ-ಅಮರಾವತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಿಸುತ್ತಿದ್ದ 8 ಕೆಜಿ 459 ಗ್ರಾಂ ತೂಕದ ಗಾಂಜಾವನ್ನು ಇಲ್ಲಿಯ ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೈಲು ಗಾಡಿಯ ಜನರಲ್ ಬೋಗಿಗಳಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು, ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ 4ರಲ್ಲಿ ಬ್ಯಾಗ್‌ನಲ್ಲಿದ್ದ ಎರಡೂವರೆ ಕೆಜಿಯ 4 ಬಂಡಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಒಟ್ಟು 4.22 ಲಕ್ಷ ರೂ ಮೌಲ್ಯದ 8 ಕೆಜಿ 459 ಗ್ರಾಂ ಗಾಂಜಾ ಜಪ್ತಿ ಮಾಡಿದ್ದು, ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *