Breaking News

ಮನೆಗೆ ನುಗ್ಗಿ 2.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಶಿವಮೊಗ್ಗ: ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಿ ಬ್ಲಾಕ್‌ನಲ್ಲಿ ಮನೆಗೆ ನುಗ್ಗಿ 2.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ‘ಬಿ’ ಬ್ಲಾಕ್‌ನ ಭರತ್ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಭರತ್ ಅವರು ಮಾ.27ರಂದು ಮನೆಗೆ ಬೀಗ ಹಾಕಿಕೊಂಡು ಭದ್ರಾವತಿಯಲ್ಲಿರುವ ಅತ್ತೆ ಮನೆಗೆ ಹೋಗಿದ್ದರು. ಮರುದಿನ ಬೆಳಗ್ಗೆ ಮನೆಗೆ ವಾಪಸ್ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕಿಟಕಿ ಗಾಜು ಹಾಗೂ ಬಾಗಿಲನ್ನು ಒಡೆದು ಒಳ ನುಗ್ಗಿರುವ ಕಳ್ಳರು ಮನೆಯ ಬೀರುವಿನಲ್ಲಿದ್ದ 28 ಗ್ರಾಂ ಚಿನ್ನದ ಸರ, ತಾಳಿ, ಓಲೆ, ಉಂಗುರ ಹಾಗೂ 150 ಗ್ರಾಂ ಬೆಳ್ಳಿಯ ಕಾಲು ಚೈನ್ ಸೇರಿ ಇತರೆ ವಸ್ತುಗಳನ್ನು ಕಳವು ಮಾಡಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *