Breaking News

ವಿಜಯಪುರದಲ್ಲಿ ಬೈಕ್‌ಗೆ ಬಸ್ ಡಿಕ್ಕಿ: ಸವಾರ ಸಜೀವ ದಹನ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ಮಂಗಳವಾರ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಬೈಕ್ ಸವಾರ ಸಜೀವ ದಹನವಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ, ಸಿಂದಗಿಯ ಅಭಿಷೇಕ ಸಾಹೇಬಗೌಡ ನಾಗರಹಳ್ಳಿ(19) ಬಸ್ಸಿನಲ್ಲಿ ಸಿಲುಕಿಕೊಂಡಿದ್ದು, ಸಜೀವ ದಹನವಾಗಿದ್ದಾನೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಸ್ಥಳಕ್ಕೆ ಸಿಂದಗಿ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ಆರಿಸಿದರು. ಸಿಂದಗಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *