Breaking News

ಕೆಲಸದಿಂದ ತೆಗೆದುಹಾಕಿದ್ದಕ್ಕೆ ಚಾಕುವಿನಿಂದ ಇರಿದು ಮ್ಯಾನೇಜರ್ ನ ಬರ್ಬರ ಹತ್ಯೆ

ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ವ್ಯಕ್ತಿಯೊಬ್ಬ ಮ್ಯಾನೇಜ್ ನನ್ನೇ ಕೊಲೆಗೈದಿರುವ ಭೀಕರ ಅಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಕಂಪನಿಯಿಂದ ತನ್ನನ್ನು ತೆಗೆದು ಹಾಕಿದರೆಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿ ಮ್ಯಾನೇಜ್ ನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪೈ.ಲಿ. ಕಂಪನಿಯಲ್ಲಿ ಘಟನೆ ನಡೆದಿದೆ. ರಾಹುಲ್ (38) ಕೊಲೆಯಾದ ಮ್ಯಾನೇಜರ್. ಘಟನಾ ಸ್ಥಳಕ್ಕೆ ರಾಜಗೋಪಾಲನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಹನುಮಂತನನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *