Breaking News

ಹಳೆಯ ವೈಷಮ್ಯದ ಹಿನ್ನೆಲೆ – ಮಾರಕಾಸ್ತ್ರಗಳಿಂದ ಕೊಚ್ಚಿ‌ ಕೊಲೆ!

ಬೆಳಗಾವಿಯಲ್ಲಿ ಹಳೆಯ ವೈಷ್ಯಮಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದ್ದು, ಮಂಗಳವಾರ ಬೆಳಕಿಗೆ ಬಂದಿದೆ. ಸಂಗನಗೌಡ ಬಸನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿಗಳ ನಡುವೆ ಕಳೆದ ಕೆಲ ವರ್ಷಗಳಿಂದ ಕಲಹ ನಡೆಯುತ್ತಿತ್ತು. ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ವ್ಯಕ್ತಿಯೋರ್ವ ಮದ್ಯಪಾನ ಮಾಡಿ ಡ್ಯಾನ್ಸ್ ಮಾಡುವ ವೇಳೆ ಸುಮಾರು 16 ಜನರಿಂದ ಭೀಕರವಾಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಬೈಲಹೊಂಗಲ ತಾಲೂಕಿನ ಸಿದ್ಧೇಶ್ವರ ಜಾತ್ರೆಯ ನಡೆಯುವ ವೇಳೆ ಮದ್ಯಪಾನ ಮಾಡಿ ಡ್ಯಾನ್ಸ್ ಮಾಡುತ್ತ ಬರುತ್ತಿದ್ದ ಸಂಗನಗೌಡನ ಮೇಲೆ 16 ಜನರ ತಂಡ ದಾಳಿ ಮಾಡಿ ರಾಡ್ ನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ಸದ್ಯ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *