Breaking News

ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ನಕಲಿ ವಾಚ್‍ಗಳ ಮಾರಾಟ: ಐವರ ಬಂಧನ

ಬೆಂಗಳೂರು: ಪ್ರತಿಷ್ಠಿತ ಕಂಪೆನಿಗಳ ಹೆಸರಿನಲ್ಲಿ ನಕಲಿ ವಾಚ್‍ಗಳನ್ನು ಮಾರಾಟ ಮಾಡುತ್ತಿದ್ದ 5 ಅಂಗಡಿಗಳ ಮೇಲೆ ಸಿಸಿಬಿ ಆರ್ಥಿಕ ಅಪರಾಧ ದಳದ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿ 25 ಲಕ್ಷ ಮೌಲ್ಯದ 670 ವಾಚ್ ಹಾಗೂ 414 ಬಿಡಿ ಭಾಗಗಳನ್ನು ಜಪ್ತಿ ಮಾಡಿದ್ದಾರೆ. ನಗರದ ಚಿಕ್ಕಪೇಟೆ, ಸುಲ್ತಾನ್‍ಪಾಳ್ಯ ಮುಖ್ಯರಸ್ತೆ, ಗಂಗಾನಗರ, ದಿಣ್ಣೂರು ಮುಖ್ಯರಸ್ತೆಯಲ್ಲಿರುವ ವಾಚ್ ಅಂಗಡಿಗಳಲ್ಲಿ ಪ್ರತಿಷ್ಠಿತ ಕಂಪೆನಿಗಳ ಹೆಸರಿನ ವಾಚ್‍ಗಳು ಹಾಗೂ ಬಿಡಿ ಭಾಗಗಳನ್ನು ನಕಲಿ ಮಾಡಿ ಅಸಲಿ ಎಂದು ನಂಬಿಸಿ ಮಾರಾಟ ಮಾಡುತ್ತಿರುವುದರ ಬಗ್ಗೆ ಟೈಟಾನ್ ಕಂಪೆನಿಯ ಅಧಿಕೃತ ಕಾನೂನು ಪ್ರತಿನಿಧಿಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಸದ್ಯಕ್ಕೆ ನಗರದ 5 ಅಂಗಡಿಗಳ ಮೇಲೆ ದಾಳಿ ಮಾಡಿ ನಕಲಿ ವಾಚ್‍ಗಳು ಹಾಗೂ ಬಿಡಿ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವಾಚ್‍ಗಳನ್ನು ಎಲ್ಲಿ ತಯಾರು ಮಾಡಲಾಗುತ್ತಿತ್ತು, ಹೇಗೆ ಸರಬರಾಜು ಮಾಡಿ ಅಂಗಡಿಗಳಲ್ಲಿಟ್ಟು ಜನರಿಗೆ ಅಸಲಿ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದ ಜಾಲದ ಹಿಂದೆ ಯಾರಿದ್ದಾರೆ ಎಂಬುವುದನ್ನು ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಲಾಗುವುದೆಂದು ನಗರ ಪೊಲೀಸ್ ಆಯುಕ್ತ ಸೀಮಂತ್‍ಕುಮಾರ್ ಸಿಂಗ್ ತಿಳಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *