Breaking News

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ!

ದೊಡ್ಡಬಳ್ಳಾಪುರ: ಹೋಟೆಲ್‌ನಲ್ಲಿ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದಲ್ಲಿ ನಡೆದಿದೆ. ಹೋಟೆಲ್ ಮಾಲೀಕ ಸೈಯದ್ ಆಪ್ರೂಜ್ ಮೇಲೆ ಆರೋಪಿಗಳು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದು,ಅವರಿಗೆ ಹಾಗೂ ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾತ್ರಿ ವೇಳೆ ಬಿಲ್ ಕೇಳಿದ್ದಕ್ಕೆ ಕೋಪಗೊಂಡ ಆರೋಪಿಗಳು ಮರುದಿನ ಬಂದು ಜಗಳವಾಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ನಂದು ಮತ್ತು ಅಭಿ ಸೇರಿದಂತೆ ಇತರರ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *