Breaking News

ಹಾವೇರಿಯಲ್ಲಿ ಭೀಕರ ದುರಂತ: ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ ಬಸ್, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ವಿಡಿಯೋ

ಹಾವೇರಿ ನಗರ ಬಸ್ ನಿಲ್ದಾಣದಲ್ಲಿ ಇಂದು (ಏಪ್ರಿಲ್ 1) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದ್ದು, ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನವೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ. ಘಟನೆಯಲ್ಲಿ 2 ವರ್ಷದ ಪುಟ್ಟ ಮಗು ಹಜರತ್ ಅಲಿಗೆ ತೀವ್ರವಾಗಿ ಗಾಯಗಳಾಗಿದ್ದು, ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಉಳಿದ ಗಾಯಾಳುಗಳಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಅಪಘಾತದ ಭೀಕರತೆಯನ್ನು ಸಾರಿ ಹೇಳುತ್ತಿವೆ. ಸಾರ್ವಜನಿಕರು ಚಾಲಕನ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *