Breaking News

ಅಪ್ಪನ ಸಿಟ್ಟಿಗೆ ಮಗು ಬಲಿ: ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಪಾಪಿ!

ಮುಂಬೈ: ಅಪ್ಪನ ಮೇಲಿನ ವೈಮನಸ್ಸಿಗೆ 4 ವರ್ಷದ ಬಾಲಕನ ಮೇಲೆ ಅಮಾನವೀಯ ದಾಳಿ ನಡೆಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಸಂದೀಪ್ ಪವಾರ್ ಎಂಬ ಆರೋಪಿ ಬಾಲಕನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಹಿತಿಯ ಪ್ರಕಾರ, ಆರೋಪಿ ಬಾಲಕನ ತಂದೆಯೊಂದಿಗೆ ಜಗಳವಾಡುತ್ತಿದ್ದನು. ಈ ವೇಳೆ ಬಾಲಕ ಇತರ ಮಕ್ಕಳೊಂದಿಗೆ ಆಟವಾಡುತ್ತಾ ಆಟೋದಲ್ಲಿ ಕುಳಿತಿದ್ದ. ತಂದೆಯ ಮೇಲಿನ ಸಿಟ್ಟಿನಿಂದ ಆರೋಪಿ ಆಟೋ ಬಳಿ ಹೋಗಿ ಮಗುವಿನ ಕಾಲು ಹಿಡಿದು ಎಳೆದುತಂದು, ತಲೆಯನ್ನು ನೆಲಕ್ಕೆ ಬಡಿದಿದ್ದಾನೆ. ಅಲ್ಲದೆ, ನಂತರ ಕಟ್ಟಡದೊಳಗೆ ಕೊಂಡೊಯ್ದು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದಿರುವುದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ತಕ್ಷಣ ಮೀರಾ ರಸ್ತೆಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *