Breaking News

ಮೂವರ ವಿರುದ್ಧ ಫೋಕ್ಸೋ ಕೇಸು ದಾಖಲು

ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿ ಬೇಡಗಂ ಪೊಲೀಸರು ಫೋಕ್ಸೋ ಕೇಸು ದಾಖಲಿಸಿದ್ದಾರೆ. ಬಾಲಕಿ ನೀಡಿದ ದೂರಿನಂತೆ ಕುತ್ತಿಕ್ಕೋಲ್‌ ಪಂಚಾಯತ್‌ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಸಂಬಂಧಿಕನ ವಿರುದ್ಧ ಫೋಕ್ಸೋ ಕೇಸು ದಾಖಲಿಸಿದ್ದು. ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. 8ನೇ ತರಗತಿಯ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಕಿಯ ತಂದೆಯ ವಿರುದ್ಧ ಮೇಲ್ಪರಂಬ ಪೊಲೀಸರು ಫೋಕ್ಸೋ ಕೇಸು ದಾಖಲಿಸಿದ್ದಾರೆ. ಬಾಲಕಿಗೆ ಕಿರುಕುಳ ನೀಡಿದ ಬಗ್ಗೆ ತಾಯಿಗೆ ತಿಳಿದೂ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಬಾಲಕಿಯ ತಾಯಿಯ ವಿರುದ್ಧವೂ ಪೊಲೀಸರು ಕೇಸು ದಾಖಲಿಸಿದ್ದಾರೆ. ತಂದೆಯನ್ನು ಬಂಧಿಸಿದ್ದಾರೆ. ಚಂದೇರದಲ್ಲಿ 6 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ 82ರ ಹರೆಯದ ವೃದ್ಧನ ವಿರುದ್ಧ ಚಂದೇರ ಪೊಲೀಸರು ಫೋಕ್ಸೋ ಕೇಸು ದಾಖಲಿಸಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *