Breaking News

ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗಳಿಗೆ ಶಿಕ್ಷೆ ಪ್ರಕಟ

ಬೆಳಗಾವಿ:ಅಪ್ರಾಪ್ತೆಗೆ ಲೈಂಗಿಕಕಿರುಕುಳ ನೀಡಿದ್ದ ಖಾನಾಪೂರ ತಾಲೂಕಿನ ಭೂರಣಕಿ ಗ್ರಾಮದ ನಿವಾಸಿ ಮೊಶೀನ್ ಸಾಹುಕಾರ(೩೦)ಮತ್ತು ಇರ್ಫಾನ್ ವಸ್ತಾದ (೨೪) ಅಪರಾಧಿಗಳಿಗೆ ತಲಾ ೩ ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ. ಅಪರಾಧಿಗಳು ೨೦೨೪ರಲ್ಲಿ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸಿವಂತೆ, ಕಿರುಕುಳ ನೀಡುವುದರ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ತನಿಖಾಧಿಕಾರಿ ಜಿಲ್ಲಾ ನ್ಯಾಯಾಲಯ ದೋಷಾರೋಪಣೆ ಪಟ್ಟಿ ಸಲ್ಲಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಈ ತೀರ್ಪು ನೀಡಿದ್ದಾರೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ 1 ಲಕ್ಷ ರೂ. ನೀಡುವಂತೆ ಆದೇಶ ಮಾಡಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲೈ.ವಿ.ಪಾಟೀಲ್ ವಾದ ಮಂಡಿಸಿದರು. .

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *