Breaking News

ಕಿಡಿಗೇಡಿಗಳಿಂದ ಸಂಕೇತ್ ನ ಸಮಾಧಿಯೂ ಧ್ವಂಸ: ಆಕ್ರೋಶ

ಶಿವಮೊಗ್ಗ: ಊರಗಡೂರಿನಲ್ಲಿ ಹತ್ಯೆಗೀಡಾಗಿದ್ದ ಅಪ್ರಾಪ್ತ ವಯಸ್ಕ ಸಂಕೇತ್ ನ ಸಮಾಧಿಯನ್ನೇ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಊರಗಡೂರಿನ ಗುಡ್ಡೆಮರಡಿ ಮಲ್ಲೇಶ್ವರ ದೇವಾಲಯ ಸಮೀಪದಲ್ಲಿರುವ ಶ್ಮಶಾನದಲ್ಲಿರುವ ಸಮಾಧಿಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ, ದೃಷ್ಕೃತ್ಯ ಮೆರೆದಿದ್ದಾರೆ. ಸಂಕೇತ್ ಪೋಷಕರು ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶ್ಮಶಾನದ ಬಳಿ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಫೆಬ್ರವರಿ 23 ರಂದು ಅನ್ಯಕೋಮಿನ ಅಪ್ರಾಪ್ತ ಯುವಕರಿಂದ ಸಂಕೇತ್ ಹತ್ಯೆ ನಡೆದಿತ್ತು. ಈ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಪ್ರಕರಣ ಸಂಬಂಧ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *