ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ರಾಜ್ಯ ನರ್ಸಿಂಗ್ ಕೌನ್ಸಿಲ್‌ನ ರಿಜಿಸ್ಟ್ರಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಚೇರಿಯ ಕೆಲಸದ ನಡುವೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ, ದೈಹಿಕ ಸಂಪರ್ಕಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಈ ಅಧಿಕಾರಿ ಸಂತ್ರಸ್ತೆಯನ್ನು ಬಲವಂತವಾಗಿ ಅಪ್ಪಿಕೊಂಡು, ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದಾರೆ ಎಂದು ದೂರಲಾಗಿದೆ. ಈ ಘಟನೆಯಿಂದ ಆಘಾತಕ್ಕೊಳಗಾದ ಮಹಿಳೆಯು ಕೂಡಲೇ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಅಧಿಕಾರಿಯನ್ನು ಅರೆಸ್ಟ್ ಮಾಡಿದ್ದಾರೆ. ಹೀಗೆ ಅಧಿಕಾರಿಯ ಕಾಮಪಿಪಾಸು ವರ್ತನೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಲಾಗಿದೆ. ಕರ್ತವ್ಯದ ಸ್ಥಳದಲ್ಲಿ ರಕ್ಷಣೆ ನೀಡಬೇಕಾದ ಉನ್ನತ ಅಧಿಕಾರಿಯೇ ಈ ರೀತಿ ನೀಚ ಕೃತ್ಯ ಎಸಗಿರುವುದು ವ್ಯವಸ್ಥೆಗೆ ಕಪ್ಪುಚುಕ್ಕೆಯಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

