Breaking News

ಸೇಬು ಹಣ್ಣು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿ: ಲಕ್ಷಾಂತರ ಮೌಲ್ಯದ ಹಣ್ಣುಗಳು ರಸ್ತೆಪಾಲು

ಬೆಳಗಾವಿ: ಸೇಬು ಹಣ್ಣು ಸಾಗಿಸುತ್ತಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆ ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮುಂಬೈನಿಂದ ದಾವಣಗೆರೆ ಜಿಲೆಗೆ ಗೂಡ್ಸ್ ವಾಹನದಲ್ಲಿ ಸೇಬು ಸಾಗಿಸಲಾಗುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿದ ಗೂದ್ಸ್ ವಾಹನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಸೇಬು ಹಣ್ಣಿನ ಬಾಕ್ಸ್ ಗಳು ರಸ್ತೆ ಪಾಲಾಗಿದ್ದು, ರಸ್ತೆ ತುಂಬೆಲ್ಲ ಸೇಬು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಲಕ್ಷ ಲಕ್ಷ ಮೌಲ್ಯದ ಸೇಬು ಹಣ್ಣುಗಳು ರಸ್ತೆಪಾಲಾಗಿವೆ. ಅಪಘಾತದಲ್ಲಿ ಗೂಡ್ಸ್ ವಾಹನ ಚಾಲಕನಿಗೆ ಗಾಯಗಳಾಗಿವೆ. ವಾಹನ ಪಲ್ಟಿಯಾಗಿದ್ದರಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೆಳಗಾವಿ ಉತ್ತರ ಸಖ್ಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *