ದೊಡ್ಡಬಳ್ಳಾಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪಾಲನಜೋಗಹಳ್ಳಿ ಗ್ರಾಮದ ಬಳಿ ನಡೆದಿದೆ. ಪುರುಷೋತ್ತಮ (29) ಸ್ಥಳದಲ್ಲೆ ಸಾವನಪ್ಪಿದ ದುರ್ದೈವಿಯಾಗಿದ್ದು, ರಾಜಾನುಕುಂಟೆಯ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪುರುಷೋತ್ತಮ, ಬೈಕ್ ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಓವರ್ ಟೇಕ್ ಮಾಡಲು ಬಂದ ಕೆಎಸ್‌ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಮೇಲೆ ಬಸ್ ಹರಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

