Breaking News

ಬನಶಂಕರಿ ಸೇರಿದಂತೆ ಕೆಲವು ಬಡಾವಣೆಗಳಲ್ಲಿ ಅನುಮಾನಾಸ್ಪದವಾಗಿ ವಾಹನ ಓಡಾಟ: ತನಿಖೆ

ಬೆಂಗಳೂರು‌: ಬನಶಂಕರಿ ಸೇರಿದಂತೆ ಸುತ್ತಮುತ್ತಲ ಬಡಾವಣೆಗಳಲ್ಲಿ ಬೊಲೆರೊ ವಾಹನದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಟ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ‘ಇದುವರೆಗೆ ಯಾರೂ ಅಧಿಕೃತವಾಗಿ ದೂರು ನೀಡಿಲ್ಲ.ಆದರೆ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊ ಪರಿಶೀಲನೆ ನಡೆಸಲಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು. ವಾಹನ ನಿಲ್ಲಿಸಿ ಆಶೀರ್ವಾದ ಮಾಡುವ ನೆಪದಲ್ಲಿ ಕೆಲವರನ್ನು ಅಡ್ಡಗಟ್ಟಲಾಗಿದೆ. ರಸ್ತೆಯಲ್ಲಿ ತೆರಳುತ್ತಿದ್ದ ಬೊಲೆರೊ ವಾಹನ ಮನೆಯೊಂದರ ಗೇಟ್ ಬಳಿ ಶಾಲಾ ಬಾಲಕಿ ಕಾಣುತ್ತಿದ್ದಂತೆಯೇ ನಿಂತಿದೆ. ಬಳಿಕ ವಾಹನವು ಹಿಮ್ಮುಖವಾಗಿ ಚಲಿಸಿದೆ. ವಾಹನದಲ್ಲಿ ಇದ್ದವರು ಬಾಲಕಿಯ ಬಳಿಗೆ ತೆರಳಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಬಾಲಕಿಯನ್ನು ಮನೆಯವರು ಕರೆದಿದ್ದಾರೆ. ತಕ್ಷಣವೇ ವಾಹನ ಸಹಿತ ಅಪರಿಚಿತರು ಪರಾರಿ ಆಗುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *