Breaking News

ಅಕ್ರಮವಾಗಿ ಎಮ್ಮೆ ಸಾಗಾಟ; ಮೂರು ಪ್ರಕರಣ ದಾಖಲು

ಮುದಗಲ್: ಅಕ್ರಮವಾಗಿ 14 ಎಮ್ಮೆಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದು ಮುದಗಲ್ ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಎಪಿಎಂಸಿ ನಿಯಮಗಳನ್ನು ಅನುಮತಿ ಇಲ್ಲದೇ ಅಕ್ರಮವಾಗಿ ವಾಹನದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಪಡೆದ ಪಿಎಸ್‌ಐ ವೆಂಕಟೇಶ ಮಾಡಗೇರಿ ದಾಳಿ ಮಾಡಿ ತಾಳಿಕೋಟೆ ಮೂಲದ ಮೈಬೂಬಸಾಬ್, ಇಮಾಮ್, ಜಾಕೀರ್ ಹುಸೇನ್, ಹಸನ್ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. 14 ಎಮ್ಮೆಗಳನ್ನು ಸಂರಕ್ಷಿಸಿ ಗೋಶಾಲೆಗೆ ಬಿಟ್ಟಿದ್ದಾರೆ. ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಮ್ಮೆಗಳನ್ನು ತಡೆದ ರಮೇಶ ರಾಠೋರ್‌ ಅವರಿಗೆ ಸ್ಥಳೀಯರು ಥಳಿಸಿದರು. ರಮೇಶ 7 ಜನರ ವಿರುದ್ಧ ದೂರು ನೀಡಿ ಪ್ರಕರಣ ದಾಖಲಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಶಾಂತಿ ಕದಡುವ ಪ್ರಯತ್ನ ನಡೆದಿದೆ ಎಂಬ ಆರೋಪದಡಿ 10 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *