Breaking News

ದೆಹಲಿಯಲ್ಲಿ ಮಸೀದಿ ಶೆಡ್ ಮೇಲೆ ಹತ್ತಿ ಕೇಸರಿ ಧ್ವಜ ಹಾರಿಸಿದ ಇಬ್ಬರ ಬಂಧನ

ಆಗ್ನೇಯ ದೆಹಲಿಯ ತುಘಲಕಾಬಾದ್ ಪ್ರದೇಶದಲ್ಲಿ ಬುಧವಾರ ಶೋಭಾ ಯಾತ್ರೆಯ ಸಂದರ್ಭ ಇಬ್ಬರು ವ್ಯಕ್ತಿಗಳು ಮಸೀದಿಯ ತಗಡಿನ ಶೆಡ್ ಮೇಲೆ ಹತ್ತಿ ಕೇಸರಿ ಧ್ವಜ ಹಾರಿಸಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸ್ ಕಚೇರಿಯೊಂದು ತಿಳಿಸಿದೆ. ಮಧ್ಯಾಹ್ನ 1:30 ರ ಸುಮಾರಿಗೆ ಈ ಪ್ರದೇಶದಲ್ಲಿ ಧಾರ್ಮಿಕ ಮೆರವಣಿಗೆ ಹಾದುಹೋಗುತ್ತಿದ್ದಾಗ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮಸೀದಿಯ ಶುದ್ಧೀಕರಣ ಪ್ರದೇಶದ ತಗಡಿನ ಶೆಡ್ ಮೇಲೆ ಹತ್ತಿದ್ದ ಇಬ್ಬರು ವ್ಯಕ್ತಿಗಳು ಕೇಸರಿ ಧ್ವಜ ಹಾರಿಸಿದ್ದಾರೆ. ಇದು ಸ್ಥಳೀಯರಲ್ಲಿ ಕಳವಳವನ್ನು ಉಂಟುಮಾಡಿದೆ. ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ ಕೃತ್ಯವನ್ನು ಗಮನಿಸಿದ್ದಾರೆ. ಕೂಡಲೇ ಅವರನ್ನು ಕೆಳಗಿಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಮಸೀದಿ ಸಮಿತಿಯ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದ್ದಾರೆ.. ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ. ಗಸ್ತು ಸಿಬ್ಬಂದಿಯ ತ್ವರಿತ ಕ್ರಮವು ಅನಾಹುತವನ್ನು ತಡೆದಿದೆ ಎಂದು ಅವರು ತಿಳಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *