Breaking News

KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ: 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಕೊಳಗಿಬೀಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಎರಡು ಬಸ್ಸುಗಳ ಮುಖಾಮುಖಿ ಡಿಕ್ಕಿಯಿಂದಾಗಿ ಬಸ್ ಮುಂಭಾಗವು ಸಂಪೂರ್ಣವಾಗಿ ಜಖಂ ಆಗಿದೆ. ಅಪಘಾತದಿಂದಾಗಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿರಸಿಯ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *