Breaking News

ಕ್ರಿಕೆಟ್ ಬೆಟ್ಟಿಂಗ್: ಓರ್ವನ ಬಂಧನ

ಕೋಟ: ಮಣೂರು ಗ್ರಾಮದ ಬಾಳೆಬೆಟ್ಟು ಬಸ್ಸು ನಿಲ್ದಾಣದ ಬಳಿ ಎ.2ರಂದು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೇಳೂರು ಗ್ರಾಮದ ಆದಿತ್ಯ ಶೆಟ್ಟಿ(28) ಎಂದು ಗುರುತಿಸಲಾಗಿದೆ. ಇನ್ನೋರ್ವ ಸಂದೀಪ ಗಾಣಿಗ ನೂಜಿ ಎಂಬಾತ ಪರಾರಿ ಯಾಗಿ ತಲೆಮರೆಸಿಕೊಂಡಿದ್ದಾನೆ. ಐಪಿಎಲ್ ಕ್ರಿಕೆಟ್ ಪಂದ್ಯಾಟ ಸಂಬಂಧಪಟ್ಟು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ ಬೆಟ್ಟಿಂಗ್ ಅಕ್ರಮ ದಂಧೆ ಯಲ್ಲಿ ತೊಡಗಿರುವ ಕುರಿತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಓರ್ವನನ್ನು ವಶಕ್ಕೆ ಪಡೆದುಕೊಂಡರು. ಈ ಬಗ್ಗೆ ಕೋಟ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *