Breaking News

ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ: ಉದ್ಯಮಿ ಅರೆಸ್ಟ್

ಬೆಂಗಳೂರು: ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉದ್ಯಮಿಯನ್ನು ಪುಲಕೇಶಿನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕಸ್ಟಮ್ಸ್ ಮಹಿಳಾ ಅಧೀಕ್ಷಕಿ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಉದ್ಯಮಿ ಕೃಷ್ಣಾನಿ ಅವರನ್ನು ಬಂಧಿಸಲಾಗಿದೆ. 45 ವರ್ಷದ ಮಹಿಳಾ ಅಧಿಕಾರಿ ನೀಡಿದ ದೂರಿನ ಅನ್ವಯ ಆರೋಪಿ ಎಂ. ಕೃಷ್ಣಾನಿ ಅವರನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿತ್ತು.ಆರೋಪಿಯ ವಿಚಾರಣೆ ಮುಂದುವರೆದಿದೆ. ಉದ್ಯಮಿ ಕೃಷ್ಣಾನಿ ನನ್ನ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು 2025 ಡಿಸೆಂಬರ್ ನಲ್ಲಿ ಯಲಹಂಕ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ನೀಡಿದ್ದರು. ಇಂದಿರಾನಗರ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದರಿಂದ ಪ್ರಕರಣದ ತನಿಖೆಯನ್ನು ಇಂದಿರಾನಗರ ಠಾಣೆಗೆ ವರ್ಗಾಯಿಸಲಾಗಿತ್ತು. ಹಿರಿಯ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಪುಲಿಕೇಶಿ ನಗರ ಠಾಣೆಗೆ ವರ್ಗಾಯಿಸಿದ್ದು, ತನಿಖೆ ನಡೆಸಿ ಆರೋಪಿ ಬಂಧಿಸಲಾಗಿದೆ. ಸಂತ್ರಸ್ತೆ ಹೇಳಿಕೆ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *