Breaking News

ಮಾದಕ ವಸ್ತು ಆರೋಪಿ ಸೆರೆ

ಕುಂಬಳೆ: ಮಾದಕ ವಸ್ತು ದಾಸ್ತಾನು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕುಂಬಳೆ ಕೊಯಿಪ್ಪಾಡಿ ಕಡಪ್ಪುರ ನಿವಾಸಿ ಸಾದಿಕ್ ಕೆ. (34) ಎಂಬವನನ್ನು ಮುಂಜಾಗ್ರತಾ ಕ್ರಮವಾಗಿ ಕುಂಬಳೆ ಪೊಲೀಸರು ಬಂಧಿಸಿದ್ದಾರೆ.ಡಿ. 6 ರಂದು ಉಪ್ಪಳ ಸೋಂಕಾಲ್ ಸಮೀಪ ನಡೆಸಿದ ಕಾರ್ಯಾಚರಣೆ ಯಲ್ಲಿ 43.77 ಗ್ರಾಂ ಎಂಡಿಎಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಸಾದಿಕ್ ಕೆ. ಸಹಿತ ಮೂವರನ್ನು ಬಂಧಿಸಿದ್ದರು. ನಂತರ ಸಾದಿಕ್ ಜಾಮೀನು ಮೇಲೆ ಬಿಡುಗಡೆಯಾಗಿದ್ದನು. ಬಳಿಕ‌ವೂ ಆತ‌ ಕೆಲ ಪ್ರಕರಣಗಳಲ್ಲಿ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಮತ್ತೆ ವಶಕ್ಕೆ ಪಡೆಯಲಾಗಿದೆ ಎಂದು‌ ಪೊಲೀಸ್ ಮೂಲ ತಿಳಿಸಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *