ಉಳ್ಳಾಲ: ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಬೋಳಿಯಾರ್ ನಿವಾಸಿ ಮಹಮ್ಮದ್ ಆರೀಫ್ ಎಂಬಾತನನ್ನು ದೇರಳಕಟ್ಟೆ ಬಳಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರುಗಡೆ ಮೈದಾನದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುವ ಖಚಿತ ಮಾಹಿತಿ ಪಡೆದುಕೊಂಡ ಕೊಣಾಜೆ ಎಸ್ ಐ ನಾಗರಾಜ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

