Breaking News

ವಿಜಯಪುರದಲ್ಲಿ ಘೋರ ಘಟನೆ : ಮದುವೆಗೆ ಹೆಣ್ಣು ಸಿಗದಿದ್ದಕ್ಕೆ, ಮರಕ್ಕೆ ನೇಣು ಬಿಗಿದುಕೊಂಡು ಯುವಕ ಸೂಸೈಡ್!

ವಿಜಯಪುರದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಮನನ್ನೊಂದ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಚಿಮ್ಮಲಗಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಶಂಕರ ತಳವಾರ (25) ಎಂದು ತಿಳಿದು ಬಂದಿದೆ. ಎರಡು ವರ್ಷದ ಹಿಂದೆ ಮದುವೆ ನಿಶ್ಚಯವಾಗಿ ಹಾಗೂ ಮದುವೆ ಮುರಿದು ಬಿದ್ದಿತ್ತು. ಬಳಿಕ ಎಷ್ಟೇ ಹುಡುಕಿದರೂ ಕೂಡ ಹೆಣ್ಣು ಸಿಗದಕ್ಕೆ ಶಂಕರ್ ನೊಂದು ಇಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಮೀನಿನಲ್ಲಿ ಕುರಿಗಾಹಿ ಯುವಕ ಶಂಕರ್ ನೇಣಿಗೆ ಶರಣಾಗಿದ್ದಾನೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *