ಸಕಲೇಶಪುರ : ಪಟ್ಟಣದ ಕುಶಾಲನಗರ ಬಡಾವಣೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಬೈಕ್ ಒಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಜರುಗಿದೆ. ಸ್ಥಳೀಯ ನಿವಾಸಿ ಚೋಟು ಎಂಬುವರಿಗೆ ಸೇರಿದ ಯಮಹಾ ಆರ್-15 (R15) ಬೈಕ್ ಬೆಂಕಿಗೆ ಆಹುತಿಯಾಗಿದೆ. ಚೋಟು ಅವರು ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ಬೈಕಿನ ಇಂಜಿನ್ ಭಾಗದಲ್ಲಿ ಅಲ್ಪ ಪ್ರಮಾಣದ ಹೊಗೆ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ವಾಹನವನ್ನು ಆವರಿಸಿಕೊಂಡಿದ್ದು, ಸ್ಥಳೀಯರು ತಕ್ಷಣ ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಅಷ್ಟರಲ್ಲಿ ಬೈಕ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

