Breaking News

ಜಿಮ್ ತರಬೇತುದಾರನಿಗೆ ಹಲ್ಲೆ ವಿಚಾರ : ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದೇನು ?

ಹುಬ್ಬಳ್ಳಿ : ಯುವತಿಯ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಮೂರು ದೂರುಗಳು ದಾಖಲಾಗಿದ್ದು, ಎಲ್ಲಾ ಆಯಾಮಗಳಲ್ಲಿ ಕೂಲಂಕುಷ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಯುವತಿ ಮತ್ತು ಆಕೆಯ ತಾಯಿ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳನ್ನು ನೀಡಿದ್ದಾರೆ. ಮತ್ತೊಂದೆಡೆ ಸಮೀರ್ ಕುಟುಂಬದವರು ಅಶೋಕನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವಿವರಿಸಿದರು. ಮೂರು ದೂರುಗಳನ್ನೂ ಸಮಗ್ರವಾಗಿ ಪರಿಶೀಲಿಸಲಾಗುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಿಚಾರಣೆಗೊಳಪಡಿಸಲಾಗಿದೆ. ಘಟನೆಯ ವಿಡಿಯೋವನ್ನು ಯಾರು ಚಿತ್ರೀಕರಿಸಿದ್ದಾರೆ ಎಂಬುದು ತನಿಖೆಯ ಬಳಿಕ ಸ್ಪಷ್ಟವಾಗಲಿದೆ ಎಂದು ಹೇಳಿದರು. ಸಮೀರ್ ಸಹೋದರಿ ತೈಸಿನ್ ಸೇರಿದಂತೆ ಕೆಲವರು ಲೈಂಗಿಕ ದೌರ್ಜನ್ಯಕ್ಕೆ ಸಹಕಾರ ನೀಡಿದ ಆರೋಪವೂ ಕೇಳಿಬಂದಿದ್ದು, ಈ ಕುರಿತು ಯುವತಿ ಹೇಳಿಕೆ ನೀಡಿದ್ದಾಳೆ. ಈ ಆರೋಪಗಳನ್ನೂ ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರಿಸಲಾಗುತ್ತಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಪ್ರಕರಣದ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಎನ್. ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.

Share News

About BigTv News

Check Also

ಅಮಾಯಕರಿಗೆ ಕಳ್ಳರ ಪಟ್ಟ ಕಟ್ಟಿ ಥಳಿತ – ಮಾರಣಾಂತಿಕ ಹಲ್ಲೆ!

ಬೆಂಗಳೂರು: ವಾಹನ ಅಡ್ಡ ಬಂದ ವಿಚಾರಕ್ಕೆ ರಸ್ತೆಯಲ್ಲಿ ಜಗಳವಾಡುತ್ತಿದ್ದ ಇಬ್ಬರು ಯುವಕರನ್ನು ಕಳ್ಳರೆಂದು ಭಾವಿಸಿ ಸ್ಥಳೀಯರು ಅಟ್ಟಾಡಿಸಿ ಹಲ್ಲೆ ನಡೆಸಿದ …

Leave a Reply

Your email address will not be published. Required fields are marked *