Breaking News

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ, ಲಕ್ಷಾಂತರ ರೂ. ಮೌಲ್ಯದ ಮದ್ಯ ರಸ್ತೆ ಪಾಲು!-

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಮೈಸೂರಿನಿಂದ ಕಲಬುರಗಿಗೆ ಬಿಯರ್ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಕಾಡೇನಹಳ್ಳಿ ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಚಲಿಸುತ್ತಿದ್ದ ಲಾರಿ ಚಾಲಕನ ಹತೋಟಿ ತಪ್ಪಿ ರಸ್ತೆ ಬದಿಗೆ ಮಗುಚಿಬಿದ್ದಿದೆ. ಇದರಿಂದ ಲಾರಿಯಲ್ಲಿದ್ದ ಸುಮಾರು 10 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಮದ್ಯ ರಸ್ತೆಪಾಲಾಗಿದೆ. ಬಿಯರ್ ಬಾಟಲಿಗಳು ಪುಡಿಪುಡಿಯಾಗಿ ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅದೃಷ್ಟವಶಾತ್ ಈ ಅವಘಡದಲ್ಲಿ ಲಾರಿ ಚಾಲಕ ಮಹಮ್ಮದ್ ರಫೀಕ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ಲಾರಿ ಜಖಂಗೊಂಡಿದ್ದು, ರಸ್ತೆಯ ತುಂಬಾ ಗಾಜಿನ ಚೂರುಗಳು ಹರಡಿಕೊಂಡಿದ್ದ ದೃಶ್ಯ ಕಂಡುಬಂತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಂಚಾರಕ್ಕೆ ಅಡ್ಡಿಯಾಗಿದ್ದ ಲಾರಿಯನ್ನು ತೆರವುಗೊಳಿಸಲಾಗಿದ್ದು, ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *