Breaking News

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಬಂಧನ

ಶಿವಮೊಗ್ಗ: ಭದ್ರಾವತಿಯ ಜೆಪಿಎಸ್ ಶಾಲೆಯಲ್ಲಿ ಅಡುಗೆ ಪರಿಕರ ಮತ್ತು ಗ್ಯಾಸ್ ಸಿಲಿಂಡರ್ ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಭದ್ರಾವತಿ ಪೇಪರ್‌ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ರಾಜಣ್ಣ ಅಲಿಯಾಸ್ ಕಾರ್ಪೆಂಟರ್ ರಾಜಣ್ಣ ಬಂಧಿತ ವ್ಯಕ್ತಿ. 2013ರಲ್ಲಿ ಜೆಪಿಎಸ್ ಶಾಲೆಯಲ್ಲಿ ಅಡುಗೆ ಪರಿಕರ ಮತ್ತು ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ಆನಂತರ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು. ತದನಂತರ ಜಾಮೀನಿನ ಮೇಲೆ ಹೊರಬಂದಿದ್ದ ರಾಜಣ್ಣ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಬಗ್ಗೆ 2023ರಲ್ಲಿ ನ್ಯಾಯಾಲಯವು ಎಲ್‌ಆರ್‌ಪಿ ಪ್ರಕರಣ ದಾಖಲಿಸಿ ಬಂಧನದ ವಾರೆಂಟ್ ಹೊರಡಿಸಿತ್ತು.
ಪೇಪರ್‌ಟೌನ್ ಠಾಣೆ ಪಿಎಸ್‌ಐ ಎನ್.ಕುಮಾರ್ ನೇತೃತ್ವದಲ್ಲಿ ಎಎಸ್‌ಐ ಕುಮಾರ್, ಮುಖ್ಯಪೇದೆಗಳಾದ ಯಲ್ಲಪ್ಪ, ವಾಸುದೇವ್ ಅವರು ರಾಜಣ್ಣನನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *