ಹುಬ್ಬಳ್ಳಿ: ನಗರದಲ್ಲಿ ಈಗಾಗಲೇ ಜಿಮ್ ಟ್ರೇನರ್ ಸಂಬಂಧಿತ ಪ್ರಕರಣ ಚರ್ಚೆಯಲ್ಲಿರುವ ನಡುವೆಯೇ, ಮತ್ತೊಂದು ಗಂಭೀರ ‘ಲವ್ ಜಿಹಾದ್’ ಆರೋಪದ ಪ್ರಕರಣ ಬೆಳಕಿಗೆ ಬಂದಿದೆ.
ಮುಫೀಸ್ ಮಿಯಾನ್ನವರ್ ಎಂಬಾತ ಹಿಂದೂ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಬಳಿಕ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಯು ಯುವತಿಯೊಂದಿಗೆ ಸಂಬಂಧ ಬೆಳೆಸಿ, ನಂತರ ಖಾಸಗಿ ವಿಡಿಯೋಗಳನ್ನು ಆಧಾರವಾಗಿ ಬಳಸಿಕೊಂಡು ಬೆದರಿಕೆ ಹಾಕುತ್ತಿದ್ದನೆಂದು ತಿಳಿದುಬಂದಿದೆ.
ಕಳೆದ ಆಗಸ್ಟ್ ತಿಂಗಳಲ್ಲಿ ಯುವತಿಯನ್ನು ಧಾರವಾಡದಲ್ಲಿ ರಿಜಿಸ್ಟರ್ ಮದುವೆಗೆ ಒತ್ತಾಯಿಸಿದ್ದ ಎನ್ನಲಾಗಿದೆ. ಆದರೆ ವಿಷಯ ತಿಳಿದ ಯುವತಿಯ ಪೋಷಕರು ಮದುವೆಯನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದರು. ಇದಾದ ನಂತರವೂ ಆರೋಪಿಯು ಯುವತಿಯನ್ನು ಬಿಡದೆ, ವಿಡಿಯೋ ವೈರಲ್ ಮಾಡುವ ಬೆದರಿಕೆ ಹಾಕುತ್ತಲೇ ಇದ್ದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದರ ಮಧ್ಯೆ, ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮನೆಗೆ ನುಗ್ಗಿ ಮತ್ತೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಈ ನಡುವೆ ನಗರದಲ್ಲಿ ನಡೆದಿದ್ದ ಮತ್ತೊಂದು ಪ್ರಕರಣದ ಹಿನ್ನೆಲೆ ಧೈರ್ಯಗೊಂಡ ಸಂತ್ರಸ್ತೆ, ಹಿಂದೂ ಸಂಘಟನೆಗಳ ನೆರವಿನಿಂದ ಪೊಲೀಸರಿಗೆ ದೂರು ನೀಡಿದ್ದಾಳೆ.
ಈ ಸಂಬಂಧ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಮುಫೀಸ್ ಮಿಯಾನ್ನವರ್ ವಿರುದ್ಧ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಸೇರಿದಂತೆ ವಿವಿಧ ಕಲಂ ಅಡಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

