Breaking News

ಹುಬ್ಬಳ್ಳಿಯಲ್ಲಿ ಯುವತಿಯ ಮೇಲಿನ ಅತ್ಯಾಚಾರ ಆರೋಪ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ನಗರದಲ್ಲಿ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್‌ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಮುಫೀಸ್ ಮಿಯಾನ್ನವರ್ ಎಂಬ ಯುವಕನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಯುವತಿಯ ದೂರಿನ ಪ್ರಕಾರ, ಆರೋಪಿ ಪ್ರೀತಿಯ ನೆಪದಲ್ಲಿ ಸಂಪರ್ಕ ಬೆಳೆಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಇದಲ್ಲದೆ, ಧಾರವಾಡದಲ್ಲಿ ರಿಜಿಸ್ಟರ್ ಮದುವೆ ಮಾಡಲು ಯತ್ನಿಸಿದರೂ, ವಿಷಯ ತಿಳಿದ ಕುಟುಂಬಸ್ಥರು ಮದುವೆಯನ್ನು ತಡೆದಿದ್ದಾರೆ. ನಂತರವೂ ಆರೋಪಿ ಬೆದರಿಕೆ ಮುಂದುವರಿಸಿದ್ದು, ಯುವತಿ ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿ ಮತ್ತೊಮ್ಮೆ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *