Breaking News

ಬಸ್‌ನಲ್ಲಿ ಸೀಟು ಹಿಡಿಯಲು ಹೋಗಿ ಕೈ ಕಳೆದುಕೊಂಡಿದ್ದ ಮಹಿಳೆ ಸಾವು

ಚನ್ನಪಟ್ಟಣ: ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಸೀಟು ಹಿಡಿಯಲು ಹೋಗಿ ಆಯತಪ್ಪಿ ಜಾರಿ ಬಿದ್ದು ಬಸ್ ಚಕ್ರಕ್ಕೆ ಸಿಲುಕಿ ಕೈ ಸಂಪೂರ್ಣ ಜಜ್ಜಿಹೋಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ. ತಾಲ್ಲೂಕಿನ ಹೊನ್ನಾಯಕನಹಳ್ಳಿ ಜಯಮ್ಮ (60) ಮೃತರು. ಅವರು ಏ.2ರಂದು ಕಾರ್ಯನಿಮಿತ್ತ ನಗರಕ್ಕೆ ಬಂದು ವಾಪಸ್ ತಮ್ಮ ಗ್ರಾಮಕ್ಕೆ ತೆರಳಲು ಬಸ್‌ ಹತ್ತಿದ್ದರು. ನಿಧಾನಕ್ಕೆ ಚಲಿಸುತ್ತಿದ್ದ ವೇಳೆಯಲ್ಲಿಯೇ ಸೀಟು ಹಿಡಿಯಲು ಹೋಗಿ ಕಾಲು ಜಾರಿ ಬಿದ್ದಿದ್ದರು. ತೀವ್ರ ರಕ್ತಸ್ರಾವಗೊಂಡಿದ್ದ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅವರಿಗೆ ಮೂವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ಗ್ರಾಮದ ರುದ್ರಭೂಮಿಯಲ್ಲಿ ಶನಿವಾರ ಸಂಜೆ ಅಂತ್ಯಕ್ರಿಯೆ ನಡೆಯಿತು. ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *