Breaking News

ಕಾಂಗ್ರೆಸ್ ಸದಸ್ಯನಿಂದ ಹಲ್ಲೆಗೊಳಗಾದ ಪಾಲಿಕೆ ಇಂಜಿನಿಯರ್ ಮೇಲೆ ಅಟ್ರಾಸಿಟಿ ಕೇಸ್ ದಾಖಲು

ಬಳ್ಳಾರಿ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯನಿಂದ ಹಲ್ಲೆಗೊಳಗಾದ ಪಾಲಿಕೆ ಇಂಜಿನಿಯರ್ ಮೇಲೆಯೇ ಅಟ್ರಾಸಿಟಿ ಕೇಸ್ ದಾಖಲಾಗಿರುವ ಘಟನೆ ನಡೆದಿದೆ. ಬಳ್ಳಾರಿ ಮಹಾನಾಗರ ಪಾಲಿಕೆ ಇಂಜಿನಿಯರ್ ವೀರೇಶ್ ಮೇಲೆ ಕಾಂಗ್ರೆಸ್ ಸದಸ್ಯ ಕುಬೇರ್ ಹಲ್ಲೆ ನಡೆಸಿದ್ದಾರೆ. ಈಗ ಹಲ್ಲೆಗೊಳಗಾದ ವಿರೇಶ್ ವಿರುದ್ಧವೇ ದೂರು ದಾಖಲಾಗಿದೆ. ಮಹಾನಗರ ಪಾಲಿಕೆ ಮೇಯರ್ ಗಾದೆಪ್ಪ ಜೊತೆ ಠಾಣೆಗೆ ಬಂದಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ವೀರೇಶ್ ವಿರುದ್ಧ ದೂರು ನೀಡಿದ್ದಾರೆ. ನಗರದ ರಾಯಲ್ ವೃತ್ತದಿಂದ ಬ್ರೂಸ್ ಪೇಟೆ ಠಾಣೆಗೆ ಪಾದಯಾತ್ರೆ ಮೂಲಕ ತೆರಳಿ ದೂರು ದಾಖಲಿಸಲಾಗಿದೆ. ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡರು, ನಮ್ಮ ಕಾರ್ಯಕರ್ತನಿ ಅಧಿಕಾರಿ ವೀರ‍ೆಶ್ ಕೆಟ್ಟ ಪದಗಳನ್ನು ಬಳಸಿ ಬೈದಿದ್ದಾರೆ. ಅದಕ್ಕೆ ಅವರ ವಿರುದ್ಧ ದೂರು ನೀಡಿದ್ದಾಗಿ ತಿಳಿಸಿದ್ದಾರೆ. ಮತ್ತೊಂದೆಡೆ ಇಂಜಿನಿಯರ್ ವೀರೇಶ್ ಮೇಲೆ ಹಲ್ಲೆ ನಡೆಸಿದ್ದಕ್ಕೆ ಬ್ರೂಸ್ ಪೇಟ್ ಪೊಲೀಸ್ ಠಾಣೆಯಲ್ಲಿ ಕುಬೇರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ವೀರೇಶ್ ಅವರು ಸರ್ಕಾರಿ ಕೆಲಸಕ್ಕೆ ಅಡ್ಡಿ, ಜೀವ ಬೆದರಿಕೆ ಹಾಗೂ ಹಲ್ಲೆ ಪ್ರಕರಣ ದಾಖಲಿಸಿದ್ದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *