Breaking News

ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ – ಮೂವರಿಗೆ ಗಂಭಿರ ಗಾಯ

ಮಂಡ್ಯ : ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಒಂದೇ ಕುಟುಂಬದ ಮೂವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆಯ ನಾಟನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪಿತ್ರಾಜಿತ ಆಸ್ತಿಯ ರಸ್ತೆಗೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಒಂದೇ ಕುಟುಂಬದ ಸೋಮೇಗೌಡ, ವಸಂತ್ ಕುಮಾರ್, ನಿಶಾಂತ್ ಕುಮಾರ್‌ಗೆ ಗಾಯವಾಗಿದ್ದು, ಉಗ್ರೇಗೌಡರ ಕುಟುಂಬದಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಸದ್ಯ ಗಾಯಾಳುಗಳಿಗೆ ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಘಟನಾ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *