ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿ, ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗು ಟ್ರ್ಯಾಕ್ಟರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದೆ. ಮೃತ ಮಗುವನ್ನು ರಬೀಯಾ ದೊಡ್ಡಮನಿ (2) ಎಂದು ಗುರುತಿಸಲಾಗಿದೆ. ಮನೆಯ ಮುಂಭಾಗದಲ್ಲಿ ಇದ್ದಾಗಲೇ ಏಕಾಏಕಿ ಬಂದ ಟ್ರ್ಯಾಕ್ಟರ್ ಮಗುವಿನ ಮೇಲೆ ಹರಿದಿದ್ದು, ಗಂಭೀರ ಗಾಯಗಳಿಂದ ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ. ಘಟನೆಯ ನಂತರ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದು, ಪ್ರಕರಣವನ್ನು ಬಂಕಾಪುರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

