ಮೊಳಕಾಲ್ಮುರು: ತಾಲ್ಲೂಕಿನ ರಾಂಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 150ರ ರಾಜಾಪುರ ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಲಗ್ಗೆರೆಯ ಸೀಗೆ ಗಾರ್ಡನ್ ನಿವಾಸಿ ಜೇಮ್ಸ್ ರವಿಚಂದ್ರ (38), ಹಾಸನ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಅಂಚೆ ಚಿಕ್ಕೇನಹಳ್ಳಿಯ ನಂಜೇಗೌಡ (24) ಮೃತರು. ಕಾರು ಬೆಂಗಳೂರು ಕಡೆಯಿಂದ ಬಳ್ಳಾರಿಗೆ ಹೋಗುತ್ತಿತ್ತು. ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ನಂತರ ರಸ್ತೆ ದಾಟಿ ಎದುರಿನ ರಸ್ತೆಗೆ ಬಂದು ನಿಂತಿದೆ. ಆಗ ಬಳ್ಳಾರಿ ಕಡೆಯಿಂದ ಬರುತಿದ್ದ ಲಾರಿಯೂ ಕಾರಿಗೆ ಡಿಕ್ಕಿ ಹೊಡೆದಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

