ಅಮಾಸೆಬೈಲು: ಹೊಸಂಗಡಿ ಪೊಲೀಸ್ ಚೆಕ್‌ಪೋಸ್ಟ್‌ನಲ್ಲಿ ರವಿವಾರ ಬೆಳಗಿನ ಜಾವ ಅಮಾಸೆಬೈಲು ಪೊಲೀಸರು ನಡೆಸಿದ ವಾಹನ ತಪಾಸಣೆ ವೇಳೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಸಾಗಾಟಕ್ಕೆ ಬಳಸಿದ ಗೂಡ್ಸ್ ವಾಹನ ಹಾಗೂ ಬೆಂಗಾವಲಾಗಿ ಬಂದಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಮೂಲದ ಮುಸ್ತಾಕ್ ಹುಸೇನ್ ಸಾಬ್ ನದಾಫ್ (29), ಸಲೀಂ ಹುಸೇನ್ ಸಾಬ್ ನದಾಫ್ (33) ಮತ್ತು ಕಂಡ್ಲೂರಿನ ನದೀಂ ಅಬ್ದುಲ್ ಖಾದರ್ (34) ಬಂಧಿತ ಆರೋಪಿಗಳು. ಕಾರಿನಲ್ಲಿದ್ದ ಮಹಮದ್ ನೌಫಿಲ್ ಮತ್ತು ಮತ್ತೊಬ್ಬ ಆರೋಪಿ ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ. ಹುಲಿಕಲ್ ಘಾಟಿಯಿಂದ ಬರುತ್ತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ, ಯಾವುದೇ ಪರವಾನಗಿ ಇಲ್ಲದೆ ಹಿಂಸಾತ್ಮಕವಾಗಿ ಎರಡು ಎತ್ತುಗಳನ್ನು ಸಾಗಿಸುತ್ತಿರುವುದು ಕಂಡುಬಂದಿದೆ. ಪ್ರಾಥಮಿಕ ವಿಚಾರಣೆ ವೇಳೆ ಎತ್ತುಗಳನ್ನು ಮಾಂಸದ ಉದ್ದೇಶಕ್ಕಾಗಿ ಸಾಗಿಸುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವವರಿಗಾಗಿ ಶೋಧ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

