ಚಿಕ್ಕಬಳ್ಳಾಪುರ: ತಾಲ್ಲೂಕಿನ ಕೊತ್ತನೂರು ಗೇಟ್‌ನ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಶನಿವಾರ ಕಾರು ಉರುಳಿ ಬಿದ್ದು ಒಂಬತ್ತು ವರ್ಷ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಕಲಬುರಗಿ ಜಿಲ್ಲೆ ಚಿಂಚೋಳಿಯ ರಾಜೇಂದ್ರ ಹಾಗೂ ಭಾಗ್ಯ ದಂಪತಿ ಪುತ್ರಿ ಅಂಕಿತಾ ಮೃತರು. ದಂಪತಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ವಾಸಿಸುತ್ತಿದ್ದು ಚಿಂಚೋಳಿಯಿಂದ ಹೊಸಕೋಟೆ ಬರುವಾಗ ಈ ಅವಘಡ ನಡೆದಿದೆ.ಕೊತ್ತನೂರು ಗೇಟ್ ಬಳಿ ಲಾರಿಯನ್ನು ಹಿಂದಿಕ್ಕುವ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಂಕಿತಾ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ಕುರಿತು ಚಿಕ್ಕಬಳ್ಳಾಪುರ ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

