Breaking News

ತುಮಕೂರಿನಲ್ಲಿ KSRTC-ಖಾಸಗಿ ಬಸ್ ಡಿಕ್ಕಿ: ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ತುಮಕೂರು: ಜಿಲ್ಲೆಯ ಶಿರಾ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಹುಬ್ಬಳ್ಳಿಯಿಂದ ಬರುತ್ತಿದ್ದ ಖಾಸಗಿ ಬಸ್‌ನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ 12 ಪ್ರಯಾಣಿಕರು ಹಾಗೂ ಖಾಸಗಿ ಬಸ್‌ನಲ್ಲಿದ್ದ 6 ಮಂದಿ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಘಟನೆ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *