ರಾಷ್ಟ್ರೀಯ ಹೆದ್ದಾರಿ- 48ರಲ್ಲಿ ಭಾನುವಾರ ಎರಡು ಬಸ್‌ಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ. ಗದಗದಿಂದ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್‌ಗೆ ಹಾವೇರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ.ಖಾಸಗಿ ಬಸ್‌ನಲ್ಲಿದ್ದ ಶಿಗ್ಗಾವಿ ಪಟ್ಟಣದ ಪ್ರವೀಣ್ (16), ರೋಣ ತಾಲ್ಲೂಕಿನ ಚವಡಿ ಗ್ರಾಮದ ಸಂಗೀತಾ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ 9 ಮಂದಿಯನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ, ಉಳಿದವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

