Breaking News

ನಡುಪದವು: ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ; ಪ್ರಕರಣ ದಾಖಲು

ಕೊಣಾಜೆ: ನಡುಪದವು ಎಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿಗಳ ಗುಂಪು ಕಾಲೇಜಿನ ಹೊರಗಡೆ ಪರಸ್ಪರ ಹೊಡೆದಾಡಿಕೊಂಡ ಪ್ರಕರಣಕ್ಕೆ ಸಂಬಂಧಸಿದಂತೆ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾಲೇಜಿನ ಗೇಟ್ ನ ಹೊರಭಾಗದಲ್ಲಿ ಎ.1 ರಂದು ಮಧ್ಯಾಹ್ನ ಸುಮಾರು 10-15 ಜನರ ತಂಡ ಅವ್ಯಾಚ್ಯವಾಗಿ ಮಾತನಾಡಿಕೊಂಡು ಪರಸ್ಪರ ಹೊಡೆದಾಡಿಕೊಂಡಿದ್ದರು. ಹೊಡೆದಾಡಿಕೊಂಡ ದೃಶ್ಯವನ್ನು ಯಾರೋ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಬಳಿಕ ಪೊಲೀಸರು ಕಾಲೇಜಿನ ಸಂಬಂಧಪಟ್ಟವರಲ್ಲಿ ವಿಚಾರಿಸಿ ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು ಹೊಡೆದಾಡಿಕೊಂಡ ಪದವಿ ಹಾಗೂ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *