Breaking News

ಧರ್ಮಸ್ಥಳ| ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಹಜರು ನಡೆಸಿ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *