Breaking News

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ; ಹೊತ್ತಿ ಉರಿದ ಕಾರು, ಚಾಲಕ ಅಪಾಯದಿಂದ ಪಾರು

ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ‌ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ತೀರ್ಥಹಳ್ಳಿಯ ನಾಲೂರು ಕೊಳಿಗೆ ಬಳಿ ನಡೆದಿದೆ. ಉಡುಪಿಯಿಂದ ಸೊರಬಕ್ಕೆ ಡಸ್ಟರ್ ಕಾರು ತೆರಳುತ್ತಿತ್ತು. ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಬಳಿ ಬರುತ್ತಿದ್ದಂತೆ ಡಸ್ಟರ್ ಕಾರಿನನ ಇಂಜಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗುಡ್ಡಕ್ಕೆ ಢಿಕ್ಕಿ ಹೊಡೆದಿದೆ. ಕಾರು ನೋಡ ನೋಡುತ್ತಿದ್ದಂತೆಯೇ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಘಟನೆ ಸಂಭವಿಸಿದಾಗ ಕಾರಿನಲ್ಲಿ ಚಾಲಕ ಒಬ್ಬರೇ ಇದ್ದು, ಕೂಡಲೇ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನನ್ನ ಸೊರಬದ ಸುಹೇಲ್ ಎಂದು ಗುರುತಿಸಲಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *