Breaking News

ನಾಲೂರು ಬಳಿ ದಗದಗನೇ ಉರಿದ ಡಸ್ಟರ್ ಕಾರು!

ತಿರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಆಗುಂಬೆ ಮಾರ್ಗದ ನಾಲೂರು ಹೊಸಮನೆ ಸಮೀಪ ಚಲಿಸುತ್ತಿದ್ದ ಡಸ್ಟರ್ ಕಾರೊಂದು ಅಪಘಾತಕ್ಕೀಡಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಸಾಗರಕ್ಕೆ ವಾಪಸ್ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಬ್ರೇಕ್ ಫೇಲ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿದೆ. ಈ ರಭಸಕ್ಕೆ ಕಾರಿನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡು ದಗದಗನೆ ಉರಿದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಏಕೈಕ ಚಾಲಕ ಸಮಯಪ್ರಜ್ಞೆಯಿಂದ ಕೂಡಲೇ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹತ್ತಿದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *