ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳವು ಮಾಡಿದ್ದ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಮತ್ತು ಬಿ.ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಬಂಧಿತ ಆರೋಪಿಗಳು. ಇವರಿಂದ ಸುಮಾರು 50,000 ರೂಪಾಯಿ ಮೌಲ್ಯದ ಸ್ಕೂಟರ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಕಳೆದ ಮಾರ್ಚ್ 21ರಂದು ಪರ್ಲಿಯಾದ ವಸತಿಗೃಹವೊಂದರ ಶೆಡ್‌ನಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನವಾಗಿತ್ತು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು (ಅ.ಕ್ರ :37/2026, ಕಲಂ:303(2) BNS). ತನಿಖೆ ಕೈಗೊಂಡ ಪೊಲೀಸರು ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

