Breaking News

ಕೊಡಗು: ಹಾರಂಗಿ ಜಲಾಶಯದ ಎಇಇ ಪುಟ್ಟಸ್ವಾಮಿ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಗೂ ಕಾವೇರಿ ನೀರಾವರಿ ನಿಗಮದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ಐ.ಕೆ.ಪುಟ್ಟಸ್ವಾಮಿ ಅವರಿಗೆ ಸಂಬಂಧಿಸಿದ 4 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕುಶಾಲನಗರದ ಹಾರಂಗಿ ಜಲಾಶಯದ ಕಚೇರಿ, ಕಾವೇರಿ ನೀರಾವರಿ ನಿಗಮದ ಕಚೇರಿ, ಹಾಸನದ ವಿದ್ಯಾ ನಗರದಲ್ಲಿರುವ ಅವರ ಸ್ವಂತ ಕಚೇರಿ ಹಾಗೂ ಮೈಸೂರಿನ ಬಾಡಿಗೆ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *