ನಗರದಲ್ಲಿಂದು ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇಲ್ಲಿನ ಸಿದ್ಧಾರ್ಥ್ ನಗರದಲ್ಲಿರುವ ಶಿವಣ್ಣ ಅವರ ಮನೆ ಹಾಗೂ ಅವರ ಕಚೇರಿ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಅಧಿಕಾರಿಗಳ ತಂಡ ಶೋಧ ಕಾರ್ಯ ನಡೆಸಿದೆ. ಸಹಾಯಕ ನಿರ್ದೇಶಕ ಶಿವಣ್ಣ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಸಲ್ಲಿಕೆಯಾಗಿದ್ದವು. ಈ ದೂರುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮತ್ತು ದಾಖಲೆಗಳನ್ನು ಸಂಗ್ರಹಿಸಲು ದಾಳಿ ನಡೆಸಿದ್ದು, ಮನೆಯಲ್ಲಿರುವ ದಾಖಲೆ ಪತ್ರಗಳನ್ನು ಪರಿಶೀಲಿಸಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

